ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹಿಂದೂ ಸಂಘಟನೆಯ ಹಿರಿಯ ಮುಖಂಡರು, ಸಾಮಾಜಿಕ ಮುಂದಾಳು ಡಾ.ಎಂ.ಕೆ. ಪ್ರಸಾದ್ ಹಾಗೂ ಅವರ ಪತ್ನಿ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಡಾ.ಎಂ.ಕೆ. ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ ಚೌಟ ಅವರು ಕೆಲ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು.


























