ಪುತ್ತೂರು : ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ, ನೋಟರಿ ಕೆ. ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ.ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್ ಹಾಗೂ ನಗರಸಭೆಯ ಮಾಜಿ ಸದಸ್ಯ ಅನ್ವರ್ ಕಾಸಿಂ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ರಾಜ್ಯದ ನಗರ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನಾಮ ನಿರ್ದೇಶನ ಮಾಡಿ ಸರಕಾರ ಆದೇಶಿಸಿದ್ದು, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ, ನೋಟರಿ ಕೆ. ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾಗಿ ಉದ್ಯಮಿ, ರೈ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ನಿಹಾಲ್ ಪಿ.ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್ ಹಾಗೂ ನಗರಸಭೆಯ ಮಾಜಿ ಸದಸ್ಯ ಅನ್ವರ್ ಕಾಸಿಂ ಅವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರಕಾರದ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಯೋಜನಾ ಸೇವೆ, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಆದೇಶಿಸಿದ್ದಾರೆ.


























