ವಿಟ್ಲ : ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ, ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಠಾಣೆಯಲ್ಲಿ ಅ.ಕ್ರ. 25/2024 ಕಲಂ:457,380 ಬಾಧಂಸಂ ರಂತೆ ಪ್ರಕರಣ ದಾಖಲಿಸಿಕೊಂಡು ವಿಶೇಷ ತನಿಖಾ ತಂಡ ತನಿಖೆ ನಡೆಸಲಾಗಿ ಆರೋಪಿಗಳನ್ನು ಬಂಧಿಸಿದ್ದು, ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯಂತ್ ಐ.ಪಿ.ಎಸ್ ಪತ್ರಿಕಾಗೋಷ್ಟಿ ಮೂಲಕ ಮಾಹಿತಿ ನೀಡಿದರು.

ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ (35), ಮಂಜೇಶ್ವರ ಬಿಂಗಿನಾನಿ ನಿವಾಸಿಇಬ್ರಾಹಿಂ ಕಲಂದರ್ (41), ಮಂಜೇಶ್ವರ ಗಾಳಿಯಡ್ಕ ನಿವಾಸಿ ದಯಾನಂದ ಎಸ್ (37) ಬಂಧಿತರು.
ಮಾ.7 ಸಂಜೆಯಿಂದ 8ರ ಬೆಳಿಗ್ಗೆಯ ಮಧ್ಯದ ಅವಧಿಯಲ್ಲಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ದಕ್ಷಿಣ ದಿಕ್ಕಿನ ಗೋಡೆಯಲ್ಲಿರುವ ಕೀಟಕಿಯ ಸರಳಗಳನ್ನು ಯಾರೋ ಕಳ್ಳರೂ ಯಾವುದೋ ಸಾಧನದಿಂದ ಮುರಿದು ಒಳಪ್ರವೇಶಿಸಿ ಗ್ಯಾಸ್ ಕಟರ್‌ನಿಂದ ಸ್ಟ್ರಾಂಗ್ ರೂಮಿನ ಬಾಗಿಲನ್ನು ತುಂಡರಿಸಿ ಒಳ ಪ್ರವೇಶಿಸಿ 17,28,735 ರೂ ನಗದು ಹಾಗೂ 696.21 ಗ್ರಾಂ ಚಿನ್ನಭರಣ ಮತ್ತು 1,00,000/- ಮೌಲ್ಯದ ಬೆಳ್ಳಿ ಕಳ್ಳತನ ಮಾಡಿದ ಬಗ್ಗೆ ವಿಟ್ಲ ಠಾಣಾ ಅ.ಕ್ರ. 25/2024 ಕಲಂ:457,380 ಬಾಧಂಸಂ ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಪತ್ತೆ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ಮಾಡಿದ್ದು, ಮಾ.10 ರಂದು ಆರೋಪಿಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ 2,40,700/- ರೂ ನಗದು , ಕಳ್ಳತನದ ಹಣದಿಂದ ಖರೀದಿಸಿದ ಗೃಹೋಪಯೋಗಿ ಸಾಮಾಗ್ರಿಗಳ ಮೌಲ್ಯ -2 ಲಕ್ಷ ಒಟ್ಟು ರೂ 4,40,700/- ಹಾಗೂ ರೂ 12,48,218/-ರೂ ಮೌಲ್ಯದ ಚಿನ್ನಾಭರಣ, ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಬ್ರೀಝಾ ಕಾರು -01 ಗ್ಯಾಸ್ ಕಟರ್ ಹಾಗೂ ಇತರೆ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾದೀನಪಡಿಸಿಕೊಂಡು ಸೊತ್ತುಗಳ ಒಟ್ಟು ಮೌಲ್ಯ- 25,70,918/- ರೂ ಆಗಬಹುದಾಗಿದೆ.

ಕುಖ್ಯಾತ ಕಳ್ಳರ ಮೇಲೆ ದಾಖಲಾದ ಪ್ರಕರಣಗಳ ವಿವರ
ಆರೋಪಿಗಳಾದ ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ ಎಂಬಾತನ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ -02, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣೆಯಲ್ಲಿ -02, ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ -01, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಠಾಣಾಯಲ್ಲಿ-01, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ -01, ಮಂಗಳೂರು ನಗರದ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ -04, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾಯಲ್ಲಿ-01 , ಬೆಂಗಳೂರು ನಗರದ ವ್ಯಾಪ್ತಿಯಲ್ಲಿ -06 , ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ -01, ಉಡುಪಿ ಜಿಲ್ಲೆಯಲ್ಲಿ-03, ವಿಟ್ಲ ಪೊಲೀಸ್ ಠಾಣೆಯಲ್ಲಿ -01 ಒಟ್ಟು 23 ಪ್ರಕರಣಗಳು.
ಇಬ್ರಾಹಿಂ ಕಲಂದರ್ ಎಂಬಾತನ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ 02, ವಿಟ್ಲ ಪೊಲೀಸ್ ಠಾಣೆಯಲ್ಲಿ 03, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 01, ಮೂಡಬಿದ್ರೆ ಠಾಣೆಯಲ್ಲಿ 01 ಕೇರಳ ರಾಜ್ಯದ ಕುಂಬ್ಳೆ ಪೊಲೀಸ್ ಠಾಣೆಯಲ್ಲಿ-01 ಒಟ್ಟು-08 ಪ್ರಕರಣಗಳು ದಾಖಲಾಗಿರುತ್ತದೆ.
ದಯಾನಂದ ಎಸ್. ಎಂಬಾತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ-01 ದಾಖಲಾಗಿರುತ್ತವೆ. ಸದ್ರಿ ಪ್ರಕರಣದಲ್ಲಿ ಇನ್ನೂ 2 ಜನ ಆರೋಪಿಗಳ ಪತ್ತೆಗೆ ಬಾಕಿ ಇರುತ್ತದೆ.
ಆರೋಪಿಗಳ ಪತ್ತೆಯ ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯಂತ್ ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎನ್ ಎಂ ಹಾಗೂ ರಾಜೇಂದ್ರ ಡಿ ಎಸ್ ರವರ ಮಾರ್ಗದರ್ಶನದಂತೆ, ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್ ಈ ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್, ಉದಯರವಿ, ಹರೀಶ್ ಕುಮಾರ್, ವಿದ್ಯಾ ಕೆ.ಜೆ. ಸಿಬ್ಬಂದಿಗಳಾದ ವೆಂಕಟರಮಣ ಗೌಡ, ಪ್ರವೀಣ್ ಮೂರುಗೋಳಿ, ಉದಯ ರೈ, ರಕ್ಷೀತ್ ರೈ , ಪ್ರವೀಣ್ ರೈ ಪಾಲ್ತಾಡಿ, ಅದ್ರಾಮ, ಕರುಣಾಕರ, ರಾಹುಲ್ ರಾವ್, ಶ್ರೀಧರ ಸಿ ಎಸ್, ಜಗದೀಶ್ ಅತ್ತಾಜೆ, ಹೇಮರಾಜ್, ಅಶೋಕ್, ವಿವೇಕ್ ಕೆ., ಕುಮಾರ್ ಹೆಚ್.ಕೆ. , ಸಂಪತ್, ದಿವಾಕರ್, ಸಂತೋಷ್ ,ಕುಮಾರ್ ಮಾಯಪ್ಪ ರವರು ಭಾಗವಹಿಸಿರುತ್ತಾರೆ.
ಸದ್ರಿ ತಂಡಕ್ಕೆ ಪೊಲೀಸ್ ಅಧೀಕ್ಷಕರು ನಗದು ಬಹುಮಾನ ಘೋಷಿಸಿರುತ್ತಾರೆ.



























