ವಿಟ್ಲ : ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ನಡೆದಿದೆ.

ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಬೈಕ್ ಮತ್ತು ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಕಾರಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.



























