ಪುತ್ತೂರು : ನೆಲ್ಲಿಕಟ್ಟೆ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳನುಗ್ಗಿದ ಕಿಡಿಗೇಡಿಗಳು ಪುಟಾಣಿಗಳಿಗೆಂದು ಇಡಲಾಗಿದ್ದ ಕೋಳಿ ಮೊಟ್ಟೆಗಳನ್ನು ಅಮ್ಲೆಟ್ ಮಾಡಿ ತಿಂದು ತೆರಳಿರುವ ಘಟನೆ ಬೆಳಕಿಗೆ ಬಂದಿದೆ.

ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸಮಾಜ ಸೇವಾ ಸಂಸ್ಥೆಯ ಬಳಿಯ ಅಂಗನವಾಡಿ ಕೇಂದ್ರಕ್ಕೆ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಕೇಂದ್ರದ ಬಾಗಿಲ ಬೀಗ ಒಡೆದಿತ್ತು. ಒಳಗೆ ನೋಡಿದಾಗ ಅಡುಗೆ ಕೋಣೆಯಲ್ಲಿ ಪುಟಾಣಿಗಳಿಗೆಂದು ದಾಸ್ತಾನಿರಿಸಲಾಗಿದ್ದ ಮೊಟ್ಟೆಗಳು ಒಡೆದಿದ್ದು, ಪಕ್ಕದಲ್ಲಿರುವ ಗ್ಯಾಸ್ ಸ್ಟವ್‌ನ ಬಾನಲೆಯಲ್ಲಿ ಅಮ್ಲೆಟ್ ತುಂಡು ಇರುವುದು ಕಂಡು ಬಂದಿದೆ.
ಯಾರೋ ಕಿಡಿಗೇಡಿಗಳು ರಾತ್ರಿ ವೇಳೆ ಅಂಗನವಾಡಿಗೆ ನುಗ್ಗಿ ಅಮ್ಲೆಟ್ ಮಾಡಿ ತಿಂದು ಹೋಗಿದ್ದಾರೆ. ಘಟನೆ ಕುರಿತು ಪೊಲೀಸರು ಬಂದು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
.

























