ಕಾಸರಗೋಡು : ಖಾಸಗಿ ಬಸ್ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ವಿದ್ಯಾರ್ಥಿಗಳು ಸೇರಿದಂತೆ 20 ಮಂದಿ ಗಾಯಗೊಂಡ ಘಟನೆ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ.
ಮಧೂರು ರಾಮನಗರದ ಚೇತನ್ ಕುಮಾರ್ (37) ಮೃತ ಚಾಲಕ.
ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಚಾಲಿಂಗಾಲ್ ನ ಪೆರಿಯ ಗ್ರಾಮ ಪಂಚಾಯತ್ ಕಚೇರಿ ಸಮೀಪ ಈ ಅವಘಡ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಹಿನ್ನಲೆಯಲ್ಲಿ ಟೋಲ್ ಬೂತ್ ನಿರ್ಮಿಸಲು ಚಾಲಿಂಗಾಲ್ ನಲ್ಲಿ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಿದ್ದು, ಈ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ. ಇನ್ನು ಘಟನೆಯಲ್ಲಿ ಬಸ್ಸಿನಡಿ ಸಿಲುಕಿದ್ದವರನ್ನು ಸ್ಥಳೀಯ ನಿವಾಸಿಗಳು, ಅಗ್ನಿಶಾಮಕದಳದ ಸಿಬ್ಬಂದಿಗಳು, ಪೊಲೀಸರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.


























