ಬಂಟ್ವಾಳ : ದ್ವಿಚಕ್ರ ವಾಹನ ಕಳವಾದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನರಿಕೊಂಬು ನಿವಾಸಿ ರಮೇಶ್ ಎಂಬವರು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ರಮೇಶ್ ಹೋಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು ಮಾ.18 ರಂದು ಮಧ್ಯಾಹ್ನ ಬಂಟ್ವಾಳದ ವೈನ್ ಶಾಪ್ ವೊಂದರ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಬಂದು ದ್ವಿಚಕ್ರ ವಾಹನವನ್ನು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ವಾಹನವು ಕಾಣಿಸದೇ ಇದ್ದು, ಯಾರೋ ಕಳ್ಳರು ಅಂದಾಜು ರೂ. 30,000/- ಮೌಲ್ಯದ ಸದ್ರಿ ದ್ವಿಚಕ್ರ ವಾಹನವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 60/2024 ಕಲಂ: 379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























