ಪುತ್ತೂರು : 11 ವರ್ಷಗಳ ಹಿಂದೆ ನಡೆದ ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ವತಿಯಿಂದ ಜರುಗಿದ ಪ್ರತಿಭಟನೆಗೆ ಕೇಸ್ ದಾಖಲಾಗಿದ್ದು, ಈ ಬಗ್ಗೆ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಐವರಿಗೆ ನೋಟೀಸ್ ಜಾರಿಯಾಗಿದೆ ಎಂದು ವರದಿಯಾಗಿದೆ.
2023ರ ಆಗಸ್ಟ್ 14 ರಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ವತಿಯಿಂದ ಬೃಹತ್ ಪ್ರತಿಭಟನೆ ನಡೆದಿತ್ತು.
ದರ್ಬೆಯಿಂದ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆ ಜಾಥ ನಡೆದು, ಬಸ್ ನಿಲ್ದಾಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆದಿತ್ತು.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 87/2023 ಕಲಂ 188,290 ಐಪಿಸಿ 109 ಕೆಪಿ ಅಡಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ನಗರ ಠಾಣಾಧಿಕಾರಿಯ ಮುಂಭಾಗ ಹಾಜರಾಗಲು ಅರುಣ್ ಕುಮಾರ್ ಪುತ್ತಿಲ, ಪ್ರಸನ್ನ ಮಾರ್ತಾ, ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ ರವರಿಗೆ ನೋಟೀಸ್ ಜಾರಿಯಾಗಿದೆ.


























