ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು 6,19,200 ರೂಪಾಯಿ ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ಇದನ್ನು ಕಳ್ಳಸಾಗಣೆ ಮಾಡುವುದಕ್ಕಾಗಿ ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿ ಇಡಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

























