ಪುತ್ತೂರು : ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಿಲ್ಲೆ ಮೈದಾನದ ಟೌನ್ ಹಾಲ್ ಬಳಿ ನಡೆದಿದೆ.
ಬಪ್ಪಳಿಗೆ ನಿವಾಸಿ ಉಮ್ಮರ್ ಫಾರೂಕ್, ಉಳ್ಳಾಲ ಮುಕ್ಕಚೇರಿ ನಿವಾಸಿ ಕೆ. ಮೊಹಿದ್ದಿನಿ ಬಂಧಿತರು.
ಮಾ.20 ರಂದು ಬೆಳಿಗ್ಗೆ ಕಿಲ್ಲೆ ಮೈದಾನದಲ್ಲಿರುವ, ಟೌನ್‌ಹಾಲ್ ಬಳಿ ಸಾರ್ವಜನಿಕ ಪ್ರದೇಶದಲ್ಲಿ, ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ.ಜೆ ರವರು ಸಿಬ್ಬಂದಿಗಳೊಂದಿಗೆ ತೆರಳಿದ್ದು, ಈ ವೇಳೆ ಪರಾರಿಯಾಗಲು ಯತ್ನಿಸಿದ ಇಬ್ಬರನ್ನೂ ತಡೆದು ವಿಚಾರಿಸಿದ್ದು, ಸದ್ರಿ ವ್ಯಕ್ತಿಗಳು ನಶೆಯಲ್ಲಿದಂತೆ ಕಂಡು ಬಂದ ಹಿನ್ನೆಲೆಯಲ್ಲಿ ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಸದ್ರಿ ಆರೋಪಿಗಳು ನಿಷೇದಿತ ಗಾಂಜಾ ಅಮಲುಪದಾರ್ಥ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 27(b) NDPS ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























