ನವದೆಹಲಿ: ಲೋಕಸಭಾ ಚುನಾವಣೆ ಹೊತ್ತಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್ ನಿವಾಸದಲ್ಲೇ ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಆಮ್ ಆದ್ಮಿ ಕಾರ್ಯಕರ್ತರು ಜಮಾಯಿಸಿದ್ದಾರೆ.
ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಕೇಜ್ರಿವಾಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಜೊತೆಗೆ ಅಬಕಾರಿ ಹಗರಣ ಕೇಸ್ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿತ್ತು.
ಅಬಕಾರಿ ನೀತಿ ಅಕ್ರಮ ಕೇಸ್ನಲ್ಲಿ ಅರವಿಂದ ಕೇಜ್ರಿವಾಲ್ ಬಂಧನವಾಗಿದೆ. ಇಡಿ ಅಧಿಕಾರಿಗಳು ಸಿಎಂ ನಿವಾಸವನ್ನು ಸುತ್ತುವರೆದಿದ್ದಾರೆ. ಅಲ್ಲದೇ ಕೇಜ್ರಿವಾಲ್ ಅವರನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ.


























