ಉಪ್ಪಿನಂಗಡಿ : ಕಾರು ಮತ್ತು ಟೆಂಪೋ ನಡುವೆ ಅಪಘಾತ ಸಂಭವಿಸಿದ ಘಟನೆ ಕೋಡಿಂಬಾಡಿಯ ಅರ್ಬಿ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಟೆಂಪೋ ಹಾಗೂ ಪುತ್ತೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರಿನ ನಡುವೆ ಕೋಡಿಂಬಾಡಿಯ ಅರ್ಬಿ ಎಂಬಲ್ಲಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಎರಡು ವಾಹನಗಳಿಗೂ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

























