ಉತ್ತರ ಪ್ರದೇಶ : ಹಮೀರ್ಪುರದಲ್ಲಿ ಯುವಕನೊಬ್ಬ ತನ್ನ ತಂದೆಯ 16 ವರ್ಷದ ತಂಗಿ ಅಂದರೆ ಸೋದರ ಅತ್ತೆಯೊಂದಿಗೆ ಓಡಿ ಹೋಗಿದ್ದಾನೆ. ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್ ಏಪ್ರಿಲ್ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ.
ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಯುವಕನ ಮನೆಯವರನ್ನು ಸಂಪರ್ಕಿಸಿದಾಗ ಬಾಲಕಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್ ಏಪ್ರಿಲ್ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ. ಅಜಯ್ ತನ್ನ ಮೂವರು ಸ್ನೇಹಿತರೊಂದಿಗೆ ತಮ್ಮ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.


























