ಚೆನ್ನೈ : ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ತಮಿಳುನಾಡಿನ ಚೆನ್ನೈನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಇದೀಗ ಕಾಂಗ್ರೆಸ್ನ 4ನೇ ಪಟ್ಟಿ ರಿಲೀಸ್ ಆಗಿದೆ. ಬಿಡುಗಡೆಯಾದ ನಾಲ್ಕನೇ ಪಟ್ಟಿಯಲ್ಲಿ 46 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಅದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ತಿರುವಳ್ಳೂರು ಲೋಕಸಭೆ ಕ್ಷೇತ್ರಕ್ಕೆ ಟಿಕೆಟ್ ನೀಡಿದೆ.
ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಸೇರ್ಪಡೆ ಆದಾಗಿನಿಂದ ಕರ್ನಾಟಕದ ಐಟಿ ಸೆಲ್ನಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದರು.
ಕರ್ನಾಟಕದಲ್ಲಿ ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಪ್ರಭಾವ ಬೀರಿದ್ದು ಕಾಂಗ್ರೆಸ್ನ 5 ಗ್ಯಾರಂಟಿಗಳು. ಆ 5 ಗ್ಯಾರಂಟಿ ಯೋಜನೆಗಳ ಹಿಂದೆ ಸಸಿಕಾಂತ್ ಸೆಂಥಿಲ್ರ ಪಾತ್ರ ಪ್ರಮುಖವಾಗಿತ್ತು.


























