ಬೆಳ್ತಂಗಡಿ : ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಘಟನೆಯ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಲ್ಲಿ ಮಾತನಾಡಿದ್ದೇನೆ, ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿಯೂ ಮನವಿ ಮಾಡಿದ್ದೇನೆ.

ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕಳೆದುಕೊಂಡು ತೀವ್ರ ಆಘಾತಕ್ಕೊಳಕ್ಕಾಗಿರುವ ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಒದಗಿಸುವಂತೆ ಮುಖ್ಯಮಂತ್ರಿಗಳಲ್ಲಿ ಕೋರಿದ್ದೇನೆ ಎಂದು ತಿಳಿಸಿದರು.



























