ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಪುತ್ತೂರು ರವರನ್ನು ಆಯ್ಕೆ ಮಾಡಿ ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಎಡ್ವರ್ಡ್, ಎನ್.ಎಸ್.ಯು.ಐ ವಿದ್ಯಾರ್ಥಿ ಸಂಘಟನೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಂಘಟನೆ ಮಾಡುವಲ್ಲಿ ಇವರ ಛಲ ಗುರುತಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಪುತ್ತೂರಿನ ವಿವಿಧೆಡೆ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಎದುರಾದಾಗ ಮುಂದೆ ಬಂದು ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ ಪ್ರಮುಖರ ಜೊತೆ ಮಾತನಾಡಿ, ಹೆಚ್ಚುವರಿ ಬಸ್ ಗಳಿಗಾಗಿ ಕೊನೆವರೆಗೂ ಹೋರಾಟ ನಡೆಸಿದ್ದಾರೆ.




























