ಬೆಳ್ತಂಗಡಿ : ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ಮೃತಪಟ್ಟು., ಸಹಸವಾರ ಗಾಯಗೊಂಡಿದ್ದು, ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುರುಷೋತ್ತಮ ಮೃತರು.

ಮಾ.25 ರಂದು ಮಧ್ಯಾಹ್ನ, ಪುರುಶೋತ್ತಮ ರವರು ದ್ವಿಚಕ್ರ ವಾಹನದಲ್ಲಿ ತೌಪಿಕ್ ಅಲಿ ರವರನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದ ವೇಳೆ ಬೆಳ್ತಂಗಡಿ ತಾಲೂಕು ಹಳೆಕೋಟೆ ಪೆಟ್ರೋಲ್ ಬಂಕ್ ಬಳಿ ತಲುಪಿದಾಗ, ಪಿಕಪ್ ವಾಹನವನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಪುರುಷೋತ್ತಮ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸ್ಥಳದಿಂದ ಚಲಾಯಿಸಿಕೊಂಡು ಹೋಗಿದ್ದು, ಅಪಘಾತದ ಪರಿಣಾಮ ಪುರುಷೋತ್ತಮ ರವರು ಸಹಸವಾರ ತೌಪೀಕ್ ರವರೊಂದಿಗೆ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದ ಹಿನ್ನೆಲೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ, ಪುರುಷೋತ್ತ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದು, ಇನ್ನೊರ್ವ ಗಾಯಾಳು ತೌಪೀಕ್ ಅಲಿಯವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2024, ಕಲಂ: 279,338,304(a) ಭಾ.ದಂ.ಸಂ ಮತ್ತು ಕಲಂ 134(a)(b) 187 ಐ ಎಂ ವಿ ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




























