ಮಂಗಳೂರು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ಮಾ.28 ರಂದು ನಡೆಯಲಿದೆ.
ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ದಕ್ಷಿಣ ಕನ್ನಡ ಚುನಾವಣಾ ಪ್ರಚಾರ ಉಸ್ತುವಾರಿ ರಮಾನಾಥ ರೈ, ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.





























