ಬೆಳ್ತಂಗಡಿ : ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಗುರುವಾಯನಕೆರೆಯ ಶಕ್ತಿ ನಗರದ ಬಳಿ ನಡೆದಿದೆ.

ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಐ20 ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾದ ಘಟನೆ ನಡೆದಿದೆ.
ಘಟನೆಯಿಂದಾಗಿ ಚಾಲಕ ಲಾಯಿಲ ಮೋರ್ನಿಂಗ್ ಸ್ಟಾರ್ ನಿವಾಸಿ ವಿವಿ ಮ್ಯಾಥ್ಯೂ ಅವರ ಮಗ ಪ್ರೈಸ್ ಮ್ಯಾಥ್ಯೂ (32) ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.




























