ಉಡುಪಿ : ಪೊಲೀಸ್ ಕ್ವಾಟ್ರಸ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್‌ಸ್ಟೇಬಲ್ ಪತ್ತೆಯಾಗಿದ್ದಾರೆ.
ಜ್ಯೋತಿ (29) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳಾ ಪೇದೆ.
ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಜ್ಯೋತಿ ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಜ್ಯೋತಿ ಅವರ ಪತಿ ಕೆ.ಎಸ್.ಆರ್.ಟಿ.ಸಿ. ಯಲ್ಲಿ ಮೆಕ್ಯಾನಿಕ್ ಆಗಿದ್ದಾರೆ.
ಪ್ರತಿ ನಿತ್ಯ ದಂಪತಿ ಮಧ್ಯೆ ಜಗಳ ನಡೆಯುತ್ತಿರುವ ಬಗ್ಗೆ ಸಹೋದ್ಯೋಗಿಗಳು ಮಾಹಿತಿ ನೀಡಿದ್ದಾರೆ. ಪತಿ ಹಾಲ್ನಲ್ಲಿ ಮಲಗಿರುವ ವೇಳೆ ರೂಂನಲ್ಲಿ ಜ್ಯೋತಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.




























