ಕಡಬ : ಗೋ ಸಾಗಾಟದ ವಾಹನ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಘಟನೆ ಮರ್ದಾಳದಲ್ಲಿ ನಡೆದಿದ್ದು, ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.

ಮರ್ದಾಳ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದ ಮರ್ದಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಅಕ್ರಮ ಗೋವು ಸಾಗಟದ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದು, ಕಾರಿನಲ್ಲಿದ್ದವರು ಕಾರನ್ನು ಮರ್ದಾಳ ಸಮೀಪದ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದಾರೆ.

ಅಕ್ರಮ ಗೋಸಾಗಾಟ ಜಿಲ್ಲೆಯಾದ್ಯಂತ ನಡೆಯುತ್ತಿದೆ ಸರ್ಕಾರ ಒಂದು ವರ್ಗದ ಜನರ ಓಲೈಕೆಯಿಂದಾಗಿ ಕಡಬದಲ್ಲಿ ಅಮಾಯಕ ವ್ಯಕ್ತಿಯೊಬ್ಬರ ಮರಣವಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಈ ಘಟನೆಯನ್ನು ಖಂಡಿಸಿದರು.

ವಿಠಲ ರೈ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ಘೋಷಿಸಬೇಕು ಎಂದರು.
ಶೀಘ್ರ ನೈಜ ಆರೋಪಿಗಳ ಬಂಧನವಾಗಬೇಕು ಇಲ್ಲದಿದ್ದರೆ ಮುಂದೆ ನಡೆಯುವ ಹೋರಾಟಕ್ಕೆ ಸರ್ಕಾರವೇ ಹೊಣೆಯಾಗುತ್ತದೆ ಎಂದರು.
ಹಲವು ಪ್ರಮುಖರು ಪ್ರತಿಭಟನೆ ವೇಳೆ ಉಪಸ್ಥಿತರಿದ್ದರು.