ಹೊನ್ನಾವರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿದೆ.
ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ.
ಅನಿಲ ತುಂಬಿದ ಟ್ಯಾಂಕರ್ ಮಂಗಳೂರಿನಿಂದ ಕುಮಟಾ ಮಾರ್ಗವಾಗಿ ತೆರಳುತ್ತಿತ್ತು. ಈ ವೇಳೆ ಚಹಾ ಕುಡಿಯಲು ಡ್ರೈವರ್ ಗ್ಯಾಸ್ ಟ್ಯಾಂಕರನ್ನು ನಿಲ್ಲಿಸಿದ್ದಾನೆ. ನ್ಯೂಟ್ರಲಲ್ಲಿ ಹಾಕಿ ಚಹಾ ಕುಡಿಯಲು ತೆರಳಿದ್ದಾನೆ. ಆದರೆ ಈ ವೇಳೆ ಚಾಲಕ ಇಲ್ಲದೆ ಚಲಿಸಿದ ಟ್ಯಾಂಕರ್ ಕಾಮತ್ ಎಕ್ಸಿಕ್ಯೂಟಿವ್ ಸಮೀಪದ ರಸ್ತೆಯ ಪಕ್ಕದಲ್ಲಿನ ಹೊಂಡಕ್ಕೆ ಹೋಗಿ ಬಿದ್ದಿದೆ.
ಟ್ಯಾಂಕರ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿದ್ದು, ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಕೂಡ ಕಡಿತವಾಗಿದೆ. ಸದ್ಯ ಗ್ಯಾಸ್ ತುಂಬಿರುವ ಟ್ಯಾಂಕರ್ ಬಿದ್ದಿರೋದ್ರಿಂದ ಸುತ್ತಮುತ್ತಲಿನ ಜನರು ಆತಂಕದಲ್ಲಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಹಾಗೂ ಅಗ್ನಿಶಾಮಕದಳ ಧಾವಿಸಿದ್ದಾರೆ. ಸದ್ಯಕ್ಕೆ ಯಾವುದೇ ಸೋರಿಕೆ ಕಾರಣದ್ದರಿಂದ ಟ್ಯಾಂಕರನ್ನು ಸ್ಥಳಾಂತರ ಮಾಡಲು ಪ್ರಯತ್ನ ಮುಂದುವರಿದಿದೆ. ಹೊನ್ನಾವರ ವ್ಯಾಪ್ತಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದೆ.