ವಿಟ್ಲ : ಬಂಟ್ವಾಳ ತಾಲೂಕಿನ ಕಾಡುಮಠ ಕಡ್ಪಿಕೇರಿ ಯುವತಿಯನ್ನು ಅನ್ಯ ಕೋಮಿನ ಯುವಕನೊರ್ವ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗೆ ತೆರಳಿ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ನೊಂದ ಯುವತಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಕೊಳ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡು ವಿಟ್ಲ ಪೋಲಿಸ್ ಠಾಣೆಗೆ ದೂರು ನೀಡಿ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.