ಪುತ್ತೂರು : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ವತಿಯಿಂದ ನಾರಿಶಕ್ತಿ ಸಮಾವೇಶ ಏ.9 ರಂದು ಮಧ್ಯಾಹ್ನ 2.30ಕ್ಕೆ ಪುತ್ತೂರಿನ ಜೈನಭವನದಲ್ಲಿ ನಡೆಯಲಿದೆ.

ಈ ಬಗ್ಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿ ಸುಲೋಚನಾ ಭಟ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಾಳವಿಕಾ ಅವಿನಾಶ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

























