ಮಂಗಳೂರು : ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತಪಟ್ಟವರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ.
ತೀವ್ರವಾಗಿ ಗಾಯಗೊಂಡಿರುವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು ಎಂದು ತಿಳಿದು ಬಂದಿದೆ.
ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ ನಜ್ಜುಗುಜ್ಜಾಗಿದೆ.