ಬಂಟ್ವಾಳ : ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆ ಹೆದ್ದಾರಿಯ ರಾಯಿ ಕಂಗಿತ್ತಿಲು ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ.
ಬೆಂಕಿ ಕಾಣಿಸಿಕೊಂಡ ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.

ಘಟನೆಯಿಂದ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು.
ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ.

























