ಪುತ್ತೂರು : ಕೋವಿಡ್ ನ ಸಂಕಷ್ಟದ ಸಂದರ್ಭದಲ್ಲಿ ನೊಂದ ಕುಟುಂಬಗಳಿಗೆ ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರವಿ ಶೆಟ್ಟಿ ನೇಸರ ಅವರ ನಿರ್ದೇಶನದಂತೆ ಆಡಳಿತ ಮಂಡಳಿ ಮತ್ತು ಊರವರ ಸಹಕಾರದಲ್ಲಿ “ಶ್ರೀದೇವರ ಪ್ರಸಾದ” ಅನ್ನೋ ಹೆಸರಿನಲ್ಲಿ ಜಿನಸಿ ಸಾಮಾಗ್ರಿಗಳು ಮತ್ತು ತರಕಾರಿಗಳನ್ನು ಒಳಗೊಂಡ ಕಿಟ್ ಗಳನ್ನು ಮೇ.28 ರಂದು ನೀಡಲಾಯಿತು.
ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮೊದಲ ಹಂತದ ಕಾರ್ಯಕ್ರಮದಲ್ಲಿ ಸುಮಾರು ನೂರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬಗಳನ್ನು ಗುರುತಿಸಿ ಅವರಿಗೇ ಜಿನಸಿ ಸಾಮಾಗ್ರಿಗಳು ಮತ್ತು ತರಕಾರಿಗಳನ್ನು ಒಳಗೊಂಡ ಕಿಟ್ ಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ, ಮುರಳೀಧರ ಭಟ್ ಬಂಗಾರಡ್ಕ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸುಧೀರ್ ಶೆಟ್ಟಿ ಕಂಪ, ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಕುಮಾರ್ ಪುತ್ತಿಲ, ದುಗ್ಗಪ್ಪ ಗೌಡ ಕಡ್ಯ, ಸದಾಶಿವ ಶೆಟ್ಟಿ ಪಟ್ಟೆ, ಸಂಪ್ಯ ಗ್ರಾಮಾಂತರ ಠಾಣಾ ಸಬ್ ಇನ್ಸ್ಪೆಕ್ಟರ್ ಉದಯ ರವಿ, ಜಯಗುರು ಆಚಾರ್ ಹಿಂದಾರು, ಸುರೇಂದ್ರ ರೈ ಬಲ್ಲಮಜಲು,ಬಾಲಕೃಷ್ಣ ಕಣ್ಣುರಾಯ ಮತ್ತಿತರರು ಉಪಸ್ಥಿತರಿದ್ದರು.