ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತ್ರಿಕ ರಜೆಯನ್ನು ಏ.11ರ ಬದಲಾಗಿ ಏ.10 (ಇಂದು) ನೀಡಲಾಗಿದೆ.
ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಏ.11ರ ಬದಲಿಗೆ ಏ.10 ರಂದು ಸಾರ್ವತ್ರಿಕ ರಜೆ ಘೋಷಿಸಲು ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶಿಸಿದ್ದು, ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.


























