ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಲೋಕಸಭಾ ಚುನಾವಣೆ ಉಸ್ತುವಾರಿಗಳಾಗಿ ರಂಜಿತ್ ಬಂಗೇರ ಕೆ., ಮಹಮ್ಮದ್ ರಿಯಾಜ್, ರೋಶನ್ ರೈ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಆದೇಶಿಸಿದ್ದಾರೆ.
ಜವಾಬ್ದಾರಿಗಳನ್ನು ವಹಿಸಿಕೊಂಡು ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ವಲಯ, ಬೂತ್ ಮಟ್ಟದಲ್ಲಿ ಸಭೆ ನಡೆಸಿ ಸದರಿ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯಗಳನ್ನು ಯಶಸ್ವಿಗೊಳಿಸುವಂತೆ ತಿಳಿಸಿದ್ದಾರೆ.

























