ಕೋಡಿಂಬಾಡಿ : ಕೋಡಿಂಬಾಡಿ ಗ್ರಾಮ ಪಂಚಾಯತ್ ನ ವ್ಯಾಪ್ತಿಯ ಕಜೆ, ಕೈಪ ,ಪರಿಸರದಲ್ಲಿ ಕೊರೊನಾ ವಾರಿಯರ್ಸ್ ಗಳು ಮತ್ತು ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಬದಿನಾರು, ಪೂರ್ಣಿಮಾ ಯತೀಶ್ ಶೆಟ್ಟಿ ,ಆಶಾ ಕಾರ್ಯಕರ್ತೆ ಪವಿತ್ರಾ ಮತ್ತು ಕಜೆ ಅಂಗನವಾಡಿ ಸಹಾಯಕಿಯರಾದ ಪುಷ್ಪಾ ಇವರು ಮನೆ ಮನೆ ಭೇಟಿ ಕಾರ್ಯಕ್ರಮ ನಡೆಸಿದರು.
ಈ ಸಂದರ್ಭದಲ್ಲಿ ಲಸಿಕೆಯ ಬಗ್ಗೆ ಮಾಹಿತಿ ಮತ್ತು ಸ್ವಚ್ಛತೆಗೆ ಆದ್ಯತೆ ಮತ್ತು ಡೆಂಗ್ಯೂ ಮಲೇರಿಯಾ ಮುಂತಾದ ಜ್ವರದ ಬಗ್ಗೆ ತೀವ್ರ ಕಾಳಜಿ ವಹಿಸಬೇಕೆಂದು ಮಾಹಿತಿಯನ್ನು ನೀಡಲಾಯಿತು. ಮನೆ ಮನೆ ಭೇಟಿ ನೀಡಿ ಮಾಹಿತಿ ನೀಡುವ ಕಾರ್ಯಕ್ರಮವು ನಿರಂತರವಾಗಿ ಮುಂದುವರಿಯುತ್ತದೆ ಎಂದು ಪಂಚಾಯತ್ ಸದಸ್ಯರು ತಿಳಿಸಿದರು.