ಮಂಗಳೂರು: ಬಿಜೆಪಿ ಪರ ಚುನಾವಣಾ ಪ್ರಚಾರ ನಿಮಿತ್ತ ಇಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ 2000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಆಯೋಜನೆಗೊಂಡಿದ್ದು, ಈ ಹಿನ್ನೆಲೆ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ.
ಏರ್ಪೋರ್ಟ್ ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಭಿಗಿ ಭದ್ರತೆ ಕೈಗೊಂಡಿದ್ದು, ಸುಮಾರು 2500 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.
10 ಜನ ಎಸ್.ಪಿ ಹಾಗೂ ಹೆಚ್ಚುವರಿ ಎಸ್.ಪಿ ಅಧಿಕಾರಿಗಳು, 250 ಡಿವೈಎಸ್ಪಿ ಮತ್ತು ಪಿಎಸ್ಐ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.
ಮಧ್ಯಾಹ್ನದ ಬಳಿಕ ವಾಹನ ಸಂಚಾರ, ಪಾರ್ಕಿಂಗ್ ಸೇರಿದಂತೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ರೋಡ್ ಶೋ ನಡೆಯುವ ಪ್ರದೇಶದ ಸುತ್ತಮುತ್ತ ವಾಹನ ಸಂಚಾರ ನಿಷೇಧಿಸಲಾಗಿದೆ.
ಭದ್ರತೆ ದೃಷ್ಟಿಯಿಂದ ಮೂರು ದಿನಗಳಿಂದ ನಿರಂತರ ಡ್ರೋನ್ ಸರ್ವೇ ಮಾಡಲಾಗುತ್ತಿದೆ ಎಂದು ಭದ್ರತೆ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು.