ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಕಿಕ್ಕಿರಿದು ಜನ ಸೇರಿದ್ದರು. ಪ್ರಧಾನಿಯವರು ಮಂಗಳೂರು ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿಯವರು, ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ… pic.twitter.com/K6tC8B6nbN
— Narendra Modi (@narendramodi) April 14, 2024