ಮಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಜಿಲ್ಲೆಯಲ್ಲಿ 5,64,80,734 . ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ 816 ಎಫ್‌ಐಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



























