ವಿಟ್ಲ : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಪುಣಚ ಗ್ರಾಮದಲ್ಲಿ ನಡೆದಿದೆ.
ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆ ಕುಸಿದು ಬಿದ್ದಿದೆ.
ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿ ಮೇಲ್ಭಾಗ ಸಂಪೂರ್ಣ ಕುಸಿದಿದೆ.
ಸೇತುವೆ ಸಾಮಾಗ್ರಿಯ ನಡುವಿನಲ್ಲಿ ಓರ್ವ ವ್ಯಕ್ತಿ ಸಿಕ್ಕಿ ಹಾಕಿಕೊಂಡಿದ್ದು, ಆರು ಮಂದಿ ಗಾಯಗೊಂಡವರನ್ನು ಕೂಡಲೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ.