ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಏ.17ರ ಬೆಳಿಗ್ಗೆ 6 ಗಂಟೆಯಿಂದ ಏ.18ರ ಮಧ್ಯರಾತ್ರಿ 12 ಗಂಟೆಯವರೆಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್ ಗಳನ್ನು ಬಂದ್ ಮಾಡುವಂತೆ ತಿಳಿಸಿದ್ದಾರೆ.
ಪುತ್ತೂರು ಜಾತ್ರೋತ್ಸವ ಹಿನ್ನೆಲೆ ಸಾವಿರಾರು ಜನರು ಸೇರುವ ನಿರೀಕ್ಷೆ ಇದ್ದು, ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

