ಶಿವಮೊಗ್ಗ : ಲೋಕಸಭಾ ಕ್ಷೇತ್ರದ ಚುನಾವಣೆ ಅಖಾಡದಲ್ಲಿ ಏಪ್ರಿಲ್ 18ರಂದು ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ರವರು ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ.
ಏ.18 ರಂದು ಬೆಳಿಗ್ಗೆ ಶಿವಮೊಗ್ಗದ ಶ್ರೀ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಬೃಹತ್ ಮೆರವಣಿಗೆ ಮೂಲಕ ಬಂದು ಗೋಪಿ ವೃತ್ತದ ಹತ್ತಿರ ಸಾರ್ವಜನಿಕ ಸಭೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಿಎಂಗಳಾದ ಬಿ. ಎಸ್ ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಸುನಿಲ್ ಕುಮಾರ್, ಮಾಜಿ ಸಚಿವರಾದ ಸಿ.ಟಿ. ರವಿ, ಅರುಣ್ ಕುಮಾರ್ ಪುತ್ತಿಲ ಸಹಿತ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.
