ಪುತ್ತೂರು : ಜೀಪ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಹಿನ್ನೆಲೆ ಬೈಕ್ ಸವಾರ ಮೃತಪಟ್ಟು ಇಬ್ಬರು ಮಕ್ಕಳು ಗಾಯಗೊಂಡ ಘಟನೆ ನರಿಮೊಗರು ಸಮೀಪದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕಡ್ಯ ನಿವಾಸಿ, ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ ಮೃತರು.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನೆಯಿಂದಾಗಿ ಲೋಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.