ಪುತ್ತೂರು : ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.
ಆಟೋ ರಿಕ್ಷಾ ಚಾಲಕ ಜೈಸನ್ (30) ಮೃತರು.

ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದ್ದು, ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದು, ಪುತ್ತೂರು ಅಗ್ನಿಶಾಮಕದಳದವರು ಸ್ಥಳಕ್ಕೆ ಬಂದು ಜೈಸನ್ ಅವರನ್ನು ಹೊರತೆಗೆದಿದ್ದಾರೆ. ಆದರೆ ಜೈಸನ್ ಆಗಲೇ ಮೃತಪಟ್ಟಿದ್ದರು ಎಂದು ವರದಿಯಾಗಿದೆ.

























