ಪುತ್ತೂರು : ಶ್ರೀ ರಕ್ತೇಶ್ವರಿ ದೈವದ ನೇಮೋತ್ಸವ ಏ.29 ರಂದು ಸೂತ್ರಬೆಟ್ಟುವಿನಲ್ಲಿ ನಡೆಯಲಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ. ಎ. ವಸಂತ್ ಕುಮಾರ್ ಕೆದಿಲಾಯ ಅವರ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ಗಣಪತಿ ಹೋಮ ಮತ್ತು ರಕ್ತೇಶ್ವರಿ ತಂಬಿಲ ಸೇವೆ ಜರುಗಲಿದೆ. ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 7ರಿಂದ ಅನ್ನಸಂತರ್ಪಣೆ ಬಳಿಕ ಶ್ರೀ ರಕ್ತೇಶ್ವರಿ ದೈವದ ನೇಮೋತ್ಸವ ನಡೆಯಲಿದೆ.


























