ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.3 ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.
ಮೇ.2 ರಂದು ಬೆಳಿಗ್ಗೆ ಶ್ರೀ ಮಣಿಕಂಠ ಸನ್ನಿಧಾನದಲ್ಲಿ ಗಣಹೋಮ, ಸಂಜೆ ಶಾಸ್ತ್ರ ಕಲ್ಪೋಕ್ತ ಪೂಜೆ, ವಾಸ್ತುಹೋಮಾದಿ ಅಧಿವಾಸ ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಮೇ.3 ರಂದು ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಮೂಹೂರ್ತದಲ್ಲಿ ಸೂರ್ಯನಾರಾಯಣ ಭಟ್ ಕಶೆಕೋಡಿ ರವರ ವೈದಿಕತ್ವದಲ್ಲಿ ಶ್ರೀ ಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಲಿದೆ.
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆದು, ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.





























