ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆಯಾದ ಘಟನೆ ಮಂಗಳೂರಿನ ಹೊರ ವಲಯ ವಲಚ್ಚಿಲ್ ನ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಮಂಗಳೂರಿನ ಹೊರ ವಲಯ ವಲಚ್ಚಿಲ್ ನ ಖಾಸಗಿ ಕಾಲೇಜಿನಲ್ಲಿ ಕಾಲೇಜ್ ಫೆಸ್ಟ್ ವಿಚಾರವಾಗಿ ಜ್ಯೂನಿಯರ್ಸ್-ಸೀನಿಯರ್ಸ್ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಕೇರಳ ಮೂಲದ ವಿದ್ಯಾರ್ಥಿಗಳು ಈ ಕೃತ್ಯವೆಸಗಿದ್ದಾರೆನ್ನಲಾಗಿದ್ದು, ಕೈಗೆ ಸಿಕ್ಕ ವಸ್ತುಗಳಿಂದ ರಸ್ತೆ ಮಧ್ಯದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ಮಧ್ಯ ಪ್ರವೇಶಿಸಿದ ಹಿನ್ನೆಲೆ ಗಲಾಟೆ ತಣ್ಣಗಾಗಿದ್ದು, ವಿದ್ಯಾರ್ಥಿಗಳ ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.