ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ.7ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ. ಭಾನುವಾರ ಚಾಮರಾಜನಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.


























