ಪುತ್ತೂರು : ಬೇಲಿಯ ವಿಚಾರದಲ್ಲಿ ತಕರಾರು ತೆಗೆದು ಹಲ್ಲೆ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕು ಬಲ್ನಾಡು ನಿವಾಸಿ ರವಿ ಎಂಬವರು ನೀಡಿದ ದೂರಿನ ಮೇರೆಗೆ ಬಾಲು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ರವಿ ಎಂಬವರ ನೆರೆಮನೆಯ ನಿವಾಸಿ ಬಾಲು ಮನೆ ಬಳಿ ಬಂದು ಬೇಲಿಯ ವಿಚಾರದಲ್ಲಿ ತಕರಾರು ತೆಗೆದು, ತನ್ನ ಕೈಯಲ್ಲಿದ್ದ ಕತ್ತಿಯಿಂದ ಹಲ್ಲೆ ನಡೆಸಿದ್ದು, ಈ ವೇಳೆ ರವಿ ರವರ ಮಗ ಜಗಳ ಬಿಡಿಸಲು ಬಂದಾಗ ಆತನಿಗೂ ಹಲ್ಲೆ ನಡೆಸಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 57-2024 ಕಲಂ: ಐಪಿಸಿ U/S: 324 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


























