ಪುತ್ತೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಸರ್ಕಾರ ಯಶಸ್ವಿಯಾಗಿ ಏಳು ವರ್ಷಗಳನ್ನು ಪೂರೈಸಿದ ದಿನವನ್ನು ” ಸೇವಾಹೀ ಸಂಘಟನ್” ಎಂಬ ಹೆಸರಿನಲ್ಲಿ ದೇಶಾದ್ಯಂತ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಚರಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಹಿರೇಬಂಡಾಡಿ ಗ್ರಾಮದ ಬೂತ್ 48 ರಲ್ಲಿ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, ಪಂಚಾಯತ್ ಸದಸ್ಯರುಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಕೋವಿಡ್ 19 ಅಧಿನಿಯಮವನ್ನು ಪಾಲಿಸಿಕೊಂಡು ಕಾರ್ಯಕ್ರಮ ನಡೆಸಲಾಯಿತು.