ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿದ್ದ, ಬೆಳ್ತಂಗಡಿ ಮಾಜಿ ಸಚಿವ, ಕೆ ವಸಂತ ಬಂಗೇರ (79) ಇಂದು ನಿಧನರಾದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೇ.09 ರಂದು ಬೆಳಿಗ್ಗೆ ಬಂಗೇರ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿಗೆ ಕೊಂಡೊಯ್ಯುವ ಬಗ್ಗೆ ಮಾಹಿತಿ ಇದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
ವಸಂತ ಬಂಗೇರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸಂದೇಶ ಪ್ರಕಟಿಸಿದ್ದು, ಬಂಗೇರ ಅವರನ್ನು ನೇರ, ನಿಷ್ಠುರ ನಡೆ-ನುಡಿಯ ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ ಎಂದು ಬಣ್ಣಿಸಿದ್ದಾರೆ.



























