ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ದೇರಳಕಟ್ಟೆಯ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾಗಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ
ಮೊಹಮ್ಮದ್ ಅಮೀನ್ ರಾಫಿ(23), ವಾಸ: 2-14-1236, ಬಿಜೈ ನ್ಯೂ ರೋಡ್, 2ನೇ A ಕ್ರಾಸ್, ಬಿಜೈ ಚರ್ಚ್ ಹತ್ತಿರ, ಬಿಜೈ, ಮಂಗಳೂರು. ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ವಾಸ: ಬಂಡ್ಸಾಲೆ ಹೌಸ್, ಅಡ್ಡೂರು ಗ್ರಾಮ, ಮಂಗಳೂರು. ಮೊಹಮ್ಮದ್ ನೌಮಾನ್(22), ವಾಸ: 201, ಬಾವಾ ಮಹಲ್, ಜೆ.ಎಂ.ಕ್ರಾಸ್ ರಸ್ತೆ,ಬಂದರು, ಮಂಗಳೂರು. ಮೊಹಮ್ಮದ್ ಸಫೀಲ್(23), ವಾಸ: ಕಂಡಿಮಾರ್ ಹೌಸ್, ಸ್ಟೋರ್ ಹೌಸ್ ಹತ್ತಿರ, ಬೋಳಿಯಾರ್ ಪೋಸ್ಟ್ ಮತ್ತು ಗ್ರಾಮ, ಉಳ್ಳಾಲ ತಾಲೂಕು. ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ 6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/- ಆಗಬಹುದು.

ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು.
ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ.
ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು 2021 ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


























