ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತುಳುನಾಡ ಕುವರಿ, ಪುತ್ತೂರಿನ ರಚನಾ ರೈ ಅವರು ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಇವರು ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬಂದ ವಾಮನ ಸಿನಿಮಾಗೆ ನಾಯಕಿಯಾಗಿದ್ದರು. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ವಾಮನ ಮೊದಲ ಕನ್ನಡ ಸಿನಿಮಾವಾಗಿತ್ತು.
ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ಈ ತುಳುನಾಡ ಚೆಲುವೆ, ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ. ಈಗ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

























