ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಠಾಣೆಗೆ ದೂರು ನೀಡಿದರು.

ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ರವರ ನೇತೃತ್ವದ ನಿಯೋಗವು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಶೀಘ್ರ ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಲಾಯಿತು.


























