ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ.18 ರಂದು ಬೆಳ್ತಂಗಡಿ ತಾಲೂಕು ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ, ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಗ್ರಾಮ ಸಹಾಯಕ, ತಾಲೂಕು ಕಛೇರಿ ಸಿಬ್ಬಂದಿಯವರು, ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರೊಂದಿಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿರುತ್ತಾರೆ.
ಸ್ಥಳದಲ್ಲಿ ಅಕ್ರಮ ಗಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ-1, ಟ್ರಾಕ್ಟರ್-1, ಮದ್ದುಗುಂಡು ಜೀವಂತ 4 ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಕಾರ್ಮಿಕರನ್ನು ವಿಚಾರಣೆ ನಡೆಸಿದ್ದು, ಸದ್ರಿ ಅಕ್ರಮ ಗಣಿಗಾರಿಕೆಯನ್ನು, ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಎಂಬವರುಗಳು ನಡೆಸುತ್ತಿರುವುದು ತಿಳಿದುಬಂದಿರುತ್ತದೆ. ಸ್ಥಳದಲ್ಲಿದ್ದ ಸ್ಪೋಟಕಗಳನ್ನು ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದು, ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಎಂಬವರುಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಅ.ಕ್ರ: 56/2024, ಕಲಂ: 9B(1)(b) Explosive act 1884 ಕಲಂ 5 The Explosives Substance Act-1908 ರಂತೆ ಪ್ರಕರಣ ದಾಖಲಿಸಲಾಗಿದೆ.
ಶಶಿರಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೋರ್ವ ಪರಾರಿಯಾಗಿರುವುದಾಗಿ ವರದಿಯಾಗಿದೆ.


























