ನವದೆಹಲಿ : ಇಂದು ಲೋಕಸಭೆಗೆ ಐದನೇ ಹಂತದಲ್ಲಿ ಮತದಾನ ನಡೆಯುತ್ತಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ.
ಬಿಹಾರದ 5, ಜಮ್ಮು ಮತ್ತು ಕಾಶ್ಮೀರದ 1, ಜಾರ್ಖಂಡ್‌ನ 3, ಲಡಾಖ್‍ನ 1, ಮಹಾರಾಷ್ಟ್ರದ 13, ಒಡಿಶಾದ 5, ಉತ್ತರ ಪ್ರದೇಶದ 14 ಮತ್ತು ಪಶ್ಚಿಮ ಬಂಗಾಳದ 7 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಮೇಥಿ, ರಾಯ್ ಬರೇಲಿ, ಲಕ್ನೋ, ಕೈಸರ್ ಗಂಜ್, ಸರನ್ ಮತ್ತು ಮುಂಬೈನ ಎಲ್ಲಾ ಕ್ಷೇತ್ರಗಳು ಹೈವೊಲ್ಟೇಜ್ ಕ್ಷೇತ್ರಗಳಾಗಿವೆ.


























